Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಹಲವು ದಿನಗಳಿಂದ ಶುಷ್ಕ ವಾತಾವರಣ ಒಣಹವೆ ಇದೆ. ಎರದು ದಿನಗಳಿಂದ ಬಿಸಿಲ ಝಳ, ತಾಪಮಾನ ಹೆಚ್ಚಾಗುತ್ತಿದೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಬೆಂಗಳೂರಿನಲ್ಲಿಯೂ ಒಣ ಹವೆ ಇರಲಿದ್ದು, ಬಿಸಿಲ ಧಗೆ ಆರಂಭವಾಗಿದೆ.

Home add -Advt


Related Articles

Back to top button