Latest

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಾಗ್ಮಿ, ಪ್ರೊ.ಎಂ.ಎ.ಹೆಗಡೆ (73) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಹೆಗಡೆ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ನಿನ್ನೆ ಬೆಳಿಗ್ಗೆಯಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಯಕ್ಷಗಾನದ ಅರ್ಥದಾರಿ, ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪ್ರಸುದ್ಧ ಯಕ್ಷಗಾನ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ’ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಅಕಾಡೆಮಿ ಅಧ್ಯಕ್ಷರಾಗಿ ಯಕ್ಷಗಾನ ಕಲೆ ಹಾಗೂ ಕಲಾವಿದರ ಬದುಕಿನ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು.

Home add -Advt

Related Articles

Back to top button