
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧೆಡೆ ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಇಂದಿನಿಂದ ಒಂದು ವಾರಗಳ ಕಾಲ 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಹತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ