Karnataka NewsLatestNational

*ಎಲ್ ಪಿಜಿ ಸಿಲಿಂಡರ್ ದರದಲ್ಲಿ ದಿಢೀರ್ ಏರಿಕೆ: ಗ್ರಾಹಕರು ಕಂಗಾಲು*

ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ಭಾರತದ ಮೇಲೂ ಬಿಸಿತಟ್ಟತೊಡಗಿದೆ. ತೈಲ ಹಾಗೂ ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದ್ದು, ಅಡುಗೆ ಅನಿಲ ಹಾಗೂ ಕಮರ್ಷಿಯಲ್ ಸಿಲಿಂಡರ್ ದರದಲ್ಲಿ ಏರುಕೆಯಾಗಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದೆ. ಗೃಹಬಳಕೆಯ 14.2 ಕಿಲೋಗ್ರಾಂ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಏರಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 115 ರೂ. ಏರಿಕೆಯಾಗಿದೆ.
ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ಅಡುಗೆ ಅನಿಲ ದರ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ 1,835ಕ್ಕೆ ತಲುಪಿದೆ.


Related Articles

Back to top button