
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತಾಪಮಾನದ ಝಳ ಹೆಚ್ಚುತ್ತಿರುವ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ರಾಜ್ಯದ 25 ಜಿಲ್ಲೆಗಳಲ್ಲಿ ಏಪ್ರಿಲ್ 18ವರೆಗೆ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಹಾಸನ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ವಿಪರೀತ ಸೆಕೆ ಇರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ