Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಒಂದೆಡೆ ಕುಡಿಯುವ ನೀರಿಗೂ ಹಾಹಾಕಾರ, ಮತ್ತೊಂದೆಡೆ ಬಿಸಿಲ ಧಗೆಯಿಂದ ಬಸವಳಿದು ಹೋಗುತ್ತಿರುವ ಸ್ಥಿತಿ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲೇ ಹವಾಮಾನ ಇಲಾಖೆ ರಾಜ್ಯದಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

Related Articles

Back to top button