
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರನ ನಿವಾಸ ಸೇರಿದಂತೆ 63 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಬೆಸ್ಕಾಂ ಜಾಗೃತ ದಳದ ಹಿರಿಯ ಅಧಿಕಾರಿ ಸುಧಾಕರ್ ರೆಡ್ಡಿ ನಿವಾಸ ಕಚೇರಿ ಸೇರಿ ಮೂರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರು, ಬಳ್ಳಾರಿ, ವಿಜಯನಗರ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಯಾದಗಿರಿ ಡಿಹೆಚ್ ಒ ಆಗಿರುವ ಡಾ.ಪ್ರಭುಲಿಂಗ ಮಾನಕರ್ ಅವರ ಕಲಬುರ್ಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ