Kannada NewsKarnataka NewsLatest

*ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬಳ್ಳಾರಿ, ವಿಜಯನಗರ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.’

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಾಗೂ ಉತರ ಒಳ ನಾಡಿನ ಕೆಲವೆಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button