ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಮಳೆ ಅಬ್ಬರ ಜೋರಾಗಿದ್ದು, ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ವರುಣ ತಂಪೆರದಿದ್ದಾನೆ.
ಬೆಂಗಳೂರಿನ ಹಲವೆಡೆಗಳಲ್ಲಿ ಏಕಾಏಕಿ ಸುರಿದ ಭಾರಿ ಮಳೆಯಿದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಹಲವೆಡೆಗಳಲ್ಲಿ ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು, ಎಲ್ಲೆಂದರಲ್ಲಿ ರಸ್ತೆಗಳನ್ನು ಅಗೆದು ಗುಂಡಿ ತೋಡಲಾಗಿದೆ. ಇದರಿಂದಾಗಿ ಏಕಾಏಕಿ ಸುರಿದ ಮಳೆಯಿಂದ ಗುಂಡಿಗಳು ಜಲಾವೃತಗೊಂಡಿವೆ.
ಆರ್.ಆರ್.ನಗರ, ಸುಮನಹಳ್ಳಿ ಜಂಕ್ಷನ್, ರಿಚ್ ಮಂಡ ಸರ್ಕಲ್, ಕಾರ್ಪೊರೇಷನ್, ಕೆ.ಆರ್.ಮಾರ್ಕೆಟ್, ಮೈಸೂರು ರಸ್ತೆ, ಮೆಜೆಸ್ಟಿಕ್, ಶಿವಾಜಿನಗರ, ಮಲ್ಲೇಶ್ವರಂ , ಕೆಆರ್ ವೃತ್ತ, ಶಾಂತಿನಗರ ಸೇರಿದಂತೆ ಹಲವೆಡೆಗಳಲ್ಲಿ ಭಾರಿ ಮಳೆಯಾಗಿದ್ದು ವಾಹನ ಸವಾರರು ಪರದಾಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ