Latest

*ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

Home add -Advt

ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 35ರಿಂದ 45 ಕಿ.ಮೀಯಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರು, ಪ್ರವಾಸಿಗರು, ಸಾರ್ವಜನಿಕರು ಸಮುದ್ರ, ನದಿಗಳಿಗೆ ಇಳಿಯದಂತೆ ಸೂಚಿಸಲಾಗಿದೆ. ಜೂನ್ 9ರಿಂದ ಮೂರು ದಿನಗಳ ಕಲ ಧರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ.

 

https://pragati.taskdun.com/bellary-asm-womens-collegecollege-principalsexual-harassment/

Related Articles

Back to top button