
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಡುವೆ ತೀವ್ರ ಜಿದ್ದಾಜಿದ್ದು ಏರ್ಪಟ್ಟಿದ್ದು, 23ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮುನ್ನಡೆ ಸಾಧಿಸಿದ್ದಾರೆ. 8000 ಮತಗಳ ಅಂತರದ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಹಿನ್ನಡೆಯಲ್ಲಿದ್ದಾರೆ.
ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮುನ್ನಡೆಯಲ್ಲಿದ್ದು, ಬಸನಗೌಡ ತುರವಿಹಾಳ 9ನೇ ಸುತ್ತಿನ ಮತ ಎಣಿಕೆಯಲ್ಲಿ 10,341 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಪ್ರತಾಪ್ ಗೌಡ ಪಾಟೀಲ್ ಹಿನ್ನಡೆ ಸಾಧಿಸಿದ್ದಾರೆ.
ಬಸವಕಲ್ಯಾಣದಲ್ಲಿ 7 ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಾಲಾ ಹಾಗೂ ಜೆಡಿಎಸ್ ಅಭ್ಯರ್ಥಿ ಸೈಯದ್ ಅಲಿ ಹಿನ್ನಡೆಯಲ್ಲಿದ್ದಾರೆ. ಇನ್ನು ಬಸವಕಲ್ಯಾಣ ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಹಿನ್ನಡೆಯಲ್ಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ