Latest

*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ಮುಂಗಾರು ಚುರುಕು ಪಡೆದುಕೊಂಡಿದೆ. ಬೆಳಗಾವಿ, ಬೀದರ್, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವಿವಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ,ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.


Related Articles

Back to top button