ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಾಂತ ಮಳೆ ಅಬ್ಬರ ಜೋರಾಗಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಮಳೆ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆ ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗಲಿದ್ದು, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ,ವಿಜಯಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಕೋಲಾರ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ