*ಗುಡುಗು ಸಹಿತ ಭಾರಿ ಮಳೆ: ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತ; ರಾಜಧಾನಿಯಲ್ಲಿ ಮತ್ತೆ ಅವಾಂತರ: ಜನರ ಪರದಾಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ಹೈರಾಣಾಗುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಲೇ ಮಳೆಯ ಅಬ್ಬರ ಜೋರಾಗಿದೆ. ಸಂಜೆಯಾಗುತ್ತಿದ್ದಂತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ವಿಧಾನಸೌಧ, ಚಾಲುಕ್ಯ ಸರ್ಕಲ್, ಆರ್.ಆರ್.ನಗರ, ಮೆಜೆಸ್ಟಿಕ್, ಗಿರಿನಗರ, ಮೈಸೂರು ರಸ್ತೆ, ವಿಜಯನಗರ, ರಾಜಾಜಿನಗರ, ಉತ್ತರಹಳ್ಳಿ, ಶಾಂತಿನಗರ, ನಾಯಂಡಹಳ್ಳಿ, ಗಾಂಧಿನಗರ, ಮಲ್ಲೇಶ್ವರಂ, ರಿಚ್ ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಹಲವೆಡೆ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು, ಮನೆಗಳಿಗೆ ನಿರು ನುಗ್ಗಿದೆ. ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ವಿದ್ಯುತ್ ಕಡಿತಗೊಂಡಿದ್ದು, ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಂಗಳೂರಿನಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ