*ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ; ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ*

ಪ್ರಗತಿವಾಹಿನಿ ಸುದ್ದಿ: ರಣಬಿಸಿಲ ಹೊಡೆತಕ್ಕೆ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿಗರಿಗೆ ಮೇಘರಾಜ ತಂಪೆರೆದಿದ್ದಾನೆ. 108 ದಿನಗಳ ಬಳಿಕ ಸಿಲಿಕಾನ್ ಸಿಟಿಗೆ ಮಳೆರಾಯನ ಆಗಮನವಾಗಿದೆ. ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದ್ದ ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.Home add -Advt ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ಬಿಸಿಲ ಝಳದಿಂದ ಕಾದ ಕಾವಲಿನಂತಾಗಿದ್ದ ಬೆಂಗಳೂರು ತಣ್ಣಗಾಗಿದ್ದು, ಹಲವೆಡೆ ಸಾರ್ವಜನಿಕರು ಮಕ್ಕಳೊಂದಿಗೆ ಮಳೆಯಲ್ಲಿ ಮಿಂದು ಸಂಭ್ರಮಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಶಿವಾನಂದ ಸರ್ಕಲ್, ರಾಜಾಜಿನಗರ, ಕೆ.ಆರ್ ಪುರ, … Continue reading *ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ; ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ*