*ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆ, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಬೆಂಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಸಂಜೆಯಿಂದಲೇ ಬೆಂಗಳೂರಿನಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಒಂದು ಗಂಟೆ ಬಿಡುವು ಪಡೆದ ಮಳೆರಾಯ ರಾತ್ರಿ ವೇಳೆ ಅಬ್ಬರಿ ಬೊಬ್ಬಿರಿದಿದ್ದಾನೆ. ಬೆಂಗಳೂರಿನಾದ್ಯಂತ ಏಕಾಏಕಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನರು ತತ್ತರಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿಯೂ ಮಳೆಯಾಗುತ್ತಿದೆ. ಬೆಂಗಳೂರು, ಕೊಡಗು, ಹಾಸನ, ಮಂಡ್ಯ , ಚಾಮರಾಜನಗರಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ