ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ.
ಬೆಂಗಳೂರು ನಗರದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಮೀನುಗಾರರು, ಪ್ರವಾಸಿಗರು ಸಮುದ್ರಗಳಿಗೆ ಇಳಿಯದಂತೆ ಕಟೆಚ್ಚರಕ್ಕೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ನ.12ವರೆಗೆ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ