ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆಗೆ ರಸ್ತೆಗಳು ಜಾಲವೃತಗೊಂಡಿದ್ದು, ತಗ್ಗು ಪ್ರದೇಶಗಳು ನದಿಗಳಂತಾಗಿವೆ. ಮಳೆ ಅಬ್ಬರಕ್ಕೆ ಮತ್ತೆ ರಾಜಧಾನಿಯ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬಿರುಗಾಳಿ ಗುಡುಗು ಸಹಿತ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ ಅವಂತರಗಳು ಸೃಷ್ಟಿಯಾಗಿವೆ. ಬೆಂಗಳೂರು ಹಾಗೂ ಸುತಮುತ್ತ ರಾತ್ರಿ ಕೂಡ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ.
ಕರಾವಳಿ : ಕಾಸರಗೋಡು, ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕಡಲ ತೀರ ಭಾಗಗಳಲ್ಲಿ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಈಗಿನಂತೆ ನವೆಂಬರ್ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ನವೆಂಬರ್ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ನವೆಂಬರ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಕಡಿಮೆಯಾಗಿ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಈಗಿನಂತೆ ನವೆಂಬರ್ 20ರಿಂದ ರಾಜ್ಯದಾದ್ಯಂತ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ