*ಕರ್ನಾಟಕದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ; ರಾಜ್ಯಪಾಲರ ಮೆಚ್ಚುಗೆ*

ಪ್ರಗತಿವಾಹಿನಿ ಸುದ್ದಿ: ಇಡೀ ದೇಶಕ್ಕೆ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಧಾನಮಂಡಲ ಬಜೆಟ್ ಅಧಿವೇಶನದಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಈ ಐದು ಯೋಜನೆಗಳಿಂದ ರಾಜ್ಯದ ಜನರ ಬದುಕು ಬೆಳಕಾಗಿದೆ. ಪಂಚ ಯೋಜನೆಗಳಿಂದ ಬಡವರು ನೆಮ್ಮದಿಯಿಂದ ಬದುಕುವಂತಾಗಿದೆ. ಐದು ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ ಎಂದರು.
ಸರ್ಕಾರ ತಂದ ಗ್ಯಾರಂಟಿ ಯೋಜನೆಯಿಂದಾಗಿ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನರೇಖೆಗಿಂತ ಹೊರಗೆಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿದ್ದಾರೆ. ಸರ್ಕಾರದ ಒಂದು ನಿರ್ಧಾರದಿಮ್ದ ರಾಜ್ಯದ 5 ಕೋಟಿ ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆ.
ಶೈಕ್ಷಣಿಕ ಕ್ಷೇತ್ರದಲ್ಲಿಯೂ ಮಹತ್ತರ ಬದಲಾವಣೆಯನ್ನು ತರಲಾಗುವುದು. ಕರ್ನಾಟಕ ಸರ್ಕಾರ ಹೊಸ ಶಿಕ್ಷಣ ನೀತಿ ರೂಪಿಸಲಿದೆ. ಆರೋಗ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ, ಹೈನುಗಾರಿಕೆ ಎಲ್ಲಾ ಕ್ಷೇತ್ರಗಳಲ್ಲಿಯೂ ರಾಜ್ಯ ದಾಖಲೆಯ ಮಟ್ಟದಲ್ಲಿ ಅಭಿವೃದ್ಧಿ ಕಾಣುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ