

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಿದ್ದು, ಫೆಬ್ರವರಿ 23ವರೆಗೂ ಅಧಿವೇಶನ ನಡೆಯಲಿದೆ.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಬಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ವಾಗತಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಮಂಡಲ ಜಂಟಿ ಸದನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಆಗಿರುವ ಅಭಿವೃದ್ಧಿ, ಗ್ಯಾರಂಟಿ ಯೋನೆಗಳು, ಯೋಜನೆ ಅನುಷ್ಠಾನದ ಬಗ್ಗೆ ಮುನ್ನೋಟ ನೀಡಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ