ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ 1ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ವಿವರಿಸಿದ್ದಾರೆ.
ಬಸವಣ್ಣನವರ ತತ್ವದಡಿ ಸರ್ಕಾರ ನಡೆಯುತ್ತದೆ. ಕಾಂಗ್ರೆಸ್ ಗೆ ರಾಜ್ಯದ ಜನರು ಅಭೂತಪೂರ್ವ ಬಹುಮತ ನೀಡಿದ್ದಾರೆ. ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ತತ್ವದಡಿ ಕೆಲಸಮಾಡಬೇಕು. ಬಸವಣ್ಣ, ಸರ್ವಜ್ಞ ಸೇರಿದಂತೆ ಅನೇಕ ಸಂತರ ಶಾಂತಿ ತತ್ವ ಪಾಲನೆ ಮಾಡಲಾಗುತ್ತದೆ. ನನ್ನ ಸರ್ಕಾರದ ಆಡಳಿತ ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತೇನೆ ಎಂದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇಂದಿರಾ ಕ್ಯಾಂಟೀನ್ ಮೂಲಕ ಕರ್ನಾಟಕವನ್ನು ಹಸಿವು ಮುಕ್ತ ಮಾಡುವ ಉದ್ದೇಶ ಹೊಂದಲಾಗಿದೆ. ಬಡವರು, ದುಡಿಯುವ ವರ್ಗದವರು, ವಲಸೆ ಕಾರ್ಮಿಕರು ಮೊದಲಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ.
ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲಾಗುತ್ತದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3000 ರೂ ಹಾಗೂ ಡಿಪ್ಲೋಮಾದಾರರಿಗೆ ತಿಂಗಳಿಗೆ 1500 ರೂ ನೀಡಲಾಗುತ್ತದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2000 ರೂ ನೀಡಲಾಗುತ್ತದೆ ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ