
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದೇ ಉಪಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 3:30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಉಪಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ.
ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಲಿದೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಮೂವರು ನಾಯಕರು ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ