ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ನ.13ರಂದು ಮುಕ್ತಾಯವಾಗಿದ್ದು, ಫಲಿತಾಂಶದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಮಧ್ಯೆ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಟವಾಗಿದೆ.
ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಉಪಚುನಾವಣಾ ಫಲಿತಾಂಶ ನವೆಂಬರ್ 23ರಂದು ಪ್ರಕಟವಾಗಲಿದ್ದು, ಫಲಿತಾಂಶದ ಕುತೂಹಲ ಹೆಚ್ಚಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ.
ಪಿಮಾರ್ಕ್ ಸಮೀಕ್ಷೆ ಪ್ರಕಾರ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್ಡಿಎ 2 ಹಾಗೂ ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ. ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಗಲ್ಲಲಿದ್ದು, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲಿ ಈ ಮೊದಲು ಕ್ರಮವಾಗಿ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಶಾಸಕರಿದ್ದರು. ಅದೇ ರೀತಿ ಈಗ ನಡೆದಿರುವ ಉಪ ಚುನಾವಣೆಯಲ್ಲಿ ಮೂರೂ ಪಕ್ಷಗಳಿಗೆ ಒಂದೊಂದು ಸ್ಥಾನದ ಸಾಧ್ಯತೆ ಬಗ್ಗೆ ಗುಪ್ತಚರ ವಿಭಾಗ ಅಂದಾಜಿಸಿದೆ ಎಂದು ತಿಳಿದುಬಂದಿದೆ. ಶಿಗ್ಗಾಂವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮುನ್ನಡೆಯಾಗಲಿದೆ ಎಂದು ಗುಪ್ತಚರ ವಿಭಾಗ ನೀಡಿರುವ ವರದಿ ಹೇಳಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ