Latest

ಜಾತಿ ವಿಭಜಕ ಸಿದ್ದರಾಮಯ್ಯ; ವಿಪಕ್ಷ ನಾಯಕನ ವಿರುದ್ಧ ಬಿಜೆಪಿ ಕಿಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಜಾತಿ ಲೆಕ್ಕಾಚಾರದ ಮೇಲೆ ಮತ ಭೇಟೆಗೆ ಮುಂದಾಗಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು ಜಾತಿ ವಿಚಾರವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಜಾತಿ ವಿಭಜಕ ಎಂದು ಕರೆದಿರುವ ಬಿಜೆಪಿ ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಬಿಜೆಪಿ, ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯಗಿಂತ ನಿಷ್ಠಾತರು ಬೇರೆ ಇಲ್ಲ ಎಂದು ವಾಗ್ದಾಳಿ ನಡೆಸಿದೆ.

Home add -Advt

ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದ ಸಿದ್ದರಾಮಯ್ಯ, ವೀರಶೈವ, ಲಿಂಗಾಯಿತ ಎಂದು ವಿಭಜನೆಯ ಬೆಂಕಿ ಹಚ್ಚಿದರು. ಸಮಾಜದಲ್ಲಿ ಒಡಕು ಮೂಡಿಸಲು ಹೊರಟಿರುವ ಸಿದ್ದರಾಮಯ್ಯನವರೇ ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಿದ್ದೀರಿ? ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದೀರಾ. ನಿಜವಾಗಿ ಸಿದ್ದರಾಮಯ್ಯ ಜಾತ್ಯಾತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಎಂದು ಪ್ರಶ್ನಿಸಿದೆ.

ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಹಿಂದೂ ಧರ್ಮ ಅವಹೇಳನ ಮಾಡಿದರು. ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು. ಅದಕ್ಕಾಗಿ ಟಿಪ್ಪು ಜಯಂತಿ ನಡೆಸಿದರು. ಇದು ಸಮಾಜ ವಿಭಜನೆಯಲ್ಲವೇ? ಹೀಗಾಗಿ ಸಿದ್ದರಾಮಯ್ಯ ಜಾತಿ ವಿಭಜಕ ಎಂದು ಹೇಳಿದೆ.

ಅವರು ಹಿಂದೆ ಏನೇಲ್ಲಾ ಮಾಡಿದಾರೆ ಎಂಬುದು ನಮಗೂ ಗೊತ್ತಿದೆ – ಸಿಎಂ

Related Articles

Back to top button