ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಈಗಾಗಲೇ ಮೈಕೊರೆವ ಚಳಿಗೆ ಜನರು ತತ್ತರಿಸುತ್ತಿದ್ದಾರೆ. ಈ ನಡುವೆ ಚಳಿ ಪ್ರಮಾಣ ಇನ್ನಶ್ತು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ. ದಕ್ಷಿಣ ಒಳನಡಿನ ಜಿಲ್ಲೆಗಳಲ್ಲಿ ದಟ್ಟವಾದ ಮಂಜುಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ತಿಳಿಸಿದೆ.
ಭಾರಿ ಚಳಿ, ದಟ್ಟವಾದ ಮಂಜು ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 16, ಕಲಬುರಗಿ ಗರಿಷ್ಠ 31 ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಳಗಾವಿ ಗರಿಷ್ಠ 29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ