Latest

*ಶೀತ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ, ಚಳಿ ಹೆಚ್ಚಾಗಲಿದೆ.

ಇಂದಿನಿಂದ 6ದಿನಗಳ ಕಾಲ ಬಹುತೇಕ ಜಿಲ್ಲೆಗಳಲ್ಲಿ ಮಂಜುಕವಿದ ವಾತಾವರನ ಇರಲಿದ್ದು, ಬೆಂಗಳೂರಿನಲ್ಲಿ ಜವರಿ 19ರವರೆಗೆ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿಯೂ ಶೀತದ ಅಲೆ ಹೆಚ್ಚಲಿದೆ

ಬಾಗಲಕೋಟೆ, ಬೀದರ್, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಶೀತ ಅಲೆಯ ಮುನ್ಸೂಚನೆ ನೀದಲಾಗಿದ್ದು, ಭಾರಿ ಚಳಿ ಆರಂಭವಾಗಿದೆ.

ಇನ್ನು ರಾಜ್ಯಾದ್ಯಂತ ಶೀತ ಅಲೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕನಿಷ್ಠ ಮೂರು ಪದರಗಳ ಬಟ್ಟೆ ಧರಿಸಿ. ದೇಹವನ್ನು ಬೆಚ್ಚಗಿರುವಂತೆ ನೋಡಿಕೊಳ್ಳಿ. ದೇಹವನ್ನು ಪೂರ್ಟಿ ಕವರ್ ಮಾಡಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

*68 ಪ್ರಯಾಣಿಕರಿದ್ದ ವಿಮಾನ ಪತನ; ರನ್ ವೇ ನಲ್ಲಿಯೇ ಹೊತ್ತಿ ಉರಿದ ವಿಮಾನ*

https://pragati.taskdun.com/nepalapokhara-international-airportflight-crash/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button