Karnataka News

*ಈ ಐದು ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈ ಕೊರೆವ ಚಳಿ ಆರಂಭವಾಗಿದೆ. ಉತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಶೀತಗಾಳಿ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಡಿ.20ರ ಬಳಿಕ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಯಾದಗಿರಿ, ವಿಜಯಪುರ,ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಲಿದೆ. ಈ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ. ವಿಜಯಪುರ ಜಿಲೆಯಲ್ಲಿ 8.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ

Home add -Advt

ಡಿ.20ರಿಂದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button