ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೀನಾ, ಅಮೆರಿಕಾ, ಜಪಾನ್, ಕೊರಿಯಾ ಸೇರಿದಂತೆ ವಿದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲಿಯೂ ಆತಂಕ ಎದುರಾಗಿದೆ. ಅದರಲ್ಲಿಯೂ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಮತ್ತೆ ಬ್ರೇಕ್ ಬೀಳುವ ಆತಂಕ ಎದುರಾಗಿದೆ.
ಕಳೆದ ಎರಡು ವರ್ಷಗಳಿಂದ ಹೊಸ ವರ್ಷದ ಸಂಭ್ರಮವನ್ನು ಕಟ್ಟಿ ಹಾಕಿದ್ದ ಕೊರೊನಾ ಈ ಬಾರಿಯೂ ಮತ್ತೆ ನಿರ್ಬಂಧಕ್ಕೆ ಕಾರಣವಾಗಲಿದೆಯೇ…? ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕೊರೊನಾ ಮುಂಜಾಗೃತಾ ಕ್ರಮ ನಿಟ್ಟಿನಲ್ಲಿ ಇಂದು ಮಧ್ಯಾಹ್ನ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳ ಸಭೆ ನಡೆಯಲಿದೆ.
ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ವಿಚಾರವಾಗಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕಾರಿಗಳ, ತಜ್ಞರ ಸಭೆ ಕರೆದಿದ್ದೇನೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ಮಾರ್ಗಸೂಚಿ ಬಗ್ಗೆ ಚರ್ಚಿಸಲಾಗುವುದು. ಜನರು ಆತಂಕ ಪಡಬೇಕಿಲ್ಲ, ಆದರೆ ಜಾಗೃತೆ ವಹಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ, ಆರೋಗ್ಯಾಧಿಕಾರಿಗಳು ಅಲರ್ಟ್ ಆಗಿದ್ದು ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯಕ್ಕೆ ಚಿಂತನೆ ನಡೆಸಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಪ್ರಯಾಣಿಕರ ತಪಾಸಣೆ, ಸ್ಕ್ರೀನಿಂಗ್ ಆರಂಭಿಸಿದ್ದಾರೆ. ಮೂರು ಪಾಳಿಯಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇಂದು ಸಿಎಂ ನೇತೃತ್ವದಲ್ಲಿ ನಡೆಯಲಿರುವ ಕೋವಿಡ್ ಸಭೆ ಮಹತ್ವ ಪಡೆದುಕೊಂಡಿದ್ದು ಹೊಸ ಗೈಡ್ ಲೈನ್ ಹೊರ ಬೀಳಲಿದೆಯೇ ಕಾದುನೋಡಬೇಲಿದೆ.
*ಸುವರ್ಣ ವಿಧಾನಸೌಧದ ಸುತ್ತ ಬಿಗಿ ಭದ್ರತೆ; 1000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ*
https://pragati.taskdun.com/panchamasali2a-reservation1000-policesecurity/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ