
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ.
ದೆಹಲಿ, ಮುಂಬೈ, ಚೆನ್ನೈ ನಲ್ಲಿ ಈಗಾಗಲೇ ಸೋಂಕಿತರ ತೀವ್ರತೆ ಹೆಚ್ಚಿದ್ದು, ರಾಜ್ಯದಲ್ಲಿಯೂ ದಿಢೀರ್ ಏರಿಕೆ ಕಂಡಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 800-850ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣದಲ್ಲಿ ನಿರ್ಲಕ್ಷ ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ.
ಮೂರನೇ ಅಲೆಗೆ ದೆಹಲಿ ಮಾದರಿ ರೀತಿಯಲ್ಲಿ ಸಜ್ಜಾಗಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ಕೊವಿಡ್ ಪಾಸಿಟಿವ್ ರೇಟ್ ಶೇ.1ರಷ್ಟು ಕಡಿಮೆ ಇದ್ದರೆ ಯೆಲ್ಲೋ ಅಲರ್ಟ್, ಶೇ.1ರಿಂದ 2ರಷ್ಟು ಇದ್ದರೆ ಆರೆಂಜ್, 2ಕ್ಕಿಂತ ಹೆಚ್ಚು ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಿ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವುದು. ಈ ಕ್ರಮವನ್ನು ದೆಹಲಿಯಲ್ಲಿ ಅನುಸರಿಸಲಾಗುತ್ತಿದ್ದು, ರಾಜ್ಯದಲ್ಲಿಯೂ ಜಾರಿ ತರಬೇಕು ಎಂಬ ಸಲಹೆ ಕೇಳಿಬಂದಿದೆ.
ಕೋವಿಡ್ ಟೆಸ್ಟ್ ಹೆಚ್ಚಿಸಬೇಕು, ಕ್ಲಸ್ಟರ್ ಗಳಿಂದ ಶೇ.30ರಷ್ಟು ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸಿಗೆ ಕಳುಹಿಸಬೇಕು. ಶಾಲೆ, ವಸತಿ ಶಾಲೆ, ಹಾಸ್ಟೇಲ್, ಅಪಾರ್ಟ್ ಮೆಂಟ್, ಮಾಲ್ ಸೇರಿದಂತೆ ಜನಸಂದಣಿ ಇರುವಕಡೆಗಳಲ್ಲಿ ಕಡ್ಡಾಯ ಕೋವಿಡ್ ನಿಯಮ ಪಾಲಿಸಬೇಕು.
ಕಡಿಮೆ ಪ್ರಮಾಣದ ಕೋವಿಡ್ ಲಕ್ಷಣಗಳಿದ್ದರೆ ಮಾತ್ರ ಹೋಂ ಐಸೋಲೇಷನ್, ಉತ್ತಮವಾಗಿರುವ ಸಿಸಿಸಿ ಸಿದ್ಧತೆಗೆ ತಜ್ಞರು ಸಲಹೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ