ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಓರ್ವ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ನಿನ್ನೆ ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 60 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೇರಳದಲ್ಲಿ ಕೋವಿಡ್ ಉಪತಳಿ JN.1 ಗೆ ನಾಲ್ವರು ಬಲಿಯಾಗಿದ್ದು, ರಾಜ್ಯದಲ್ಲಿಯೂ ಉಪತಳಿ ಆತಂಕ ಎದುರಾಗಿರುವ ನಡುವೆಯೇ ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಸಮಸ್ಯೆ ಇರುವವರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.
ಸಕ್ಕರೆ ಕಾಯಿಲೆ ಇರುವವರು, ವಯಸ್ಸಾದವರು ಸಾಕಷ್ಟು ಎಚ್ಚರದಿಂದ ಇರಬೇಕು. ಕೆಮ್ಮು, ನೆಗಡಿ, ಜ್ವರ ಇದ್ದರೆ ಮಾಸ್ಕ್ ಧರಿಸಬೇಕು. ಕೆಮ್ಮು ಇರುವವರು ಜನಸಂದಣಿ ಪ್ರದೇಶಕ್ಕೆ ಹೋಗದಿರುವುದು ಉತ್ತಮ. ವಿನಾಕಾರಣ ಒಂದೆಡೆ ಜನಸೇರುವುದನ್ನು ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ