Kannada NewsKarnataka NewsLatest

*ಕೊರೊನಾ ಪ್ರಕರಣ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮವಾಗಿ ಕಟ್ಟೆಚ್ಚರಕ್ಕೆ ಸೂಚಿಸಿದ್ದು, ಮಾರ್ಗಸೂಚಿ ಪ್ರಕಟ ಮಾಡಿದೆ.

ಮಾರ್ಗಸೂಚಿಯಲ್ಲೇನಿದೆ?
ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ಹೆಚ್ಚಳ
ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರು ಕೋವಿಡ್ ಪರೀಕ್ಷೆಗೆ ಒಳಪಡಬೇಕು.
ಜ್ವರ, ಕೆಮ್ಮು, ನೆಗಡಿ ಲಕ್ಷಣಗಳಿರುವವರು ಮಾಸ್ಕ್ ಧರಿಸಬೇಕು.
60 ವರ್ಷ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಜನಸಂದಣಿ ಪ್ರದೇಶಕ್ಕೆ ತೆರಳದಿರುವುದು ಸೂಕ್ತ.
ಸ್ವಚ್ಛತೆ ಕಾಪಾಡಬೇಕು. ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳಬೇಕು.
ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು.
ಅಂತರಾಷ್ಟ್ರೀಯ ಪ್ರಯಾಣದ ವೇಳೆ ಎಚ್ಚರಿಕೆ ಅಗತ್ಯ. ವಿಮಾನ ನಿಲ್ದಾಣ, ವಿಮಾನದ ಒಳಗೆ ಮಾಸ್ಕ ಧರಿಸಿರಬೇಕು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button