ಪ್ರಗತಿವಾಹಿನಿ ಸುದ್ದಿ; ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕುದಿನಗಳಲ್ಲಿ ಚಂಡಮಾರುತ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದಿಂದಾಗಿ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ತೀವ್ರ ಕುಸಿತದಿಂದಾಗಿ ಚಂಡಮಾರುತವುಂಟಾಗುವ ಸಾಧ್ಯತೆ ಇದೆ. ಮುಂದಿನ ನಾಲ್ಕು ದಿನಗಳಲ್ಲಿ ಗಾಳಿ, ಮಳೆ, ಬೃಹದಾಕಾರದ ಅಲೆಗಳು ಸಮುದ್ರಕ್ಕೆ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕೆ ಇಳಿಯದಂತೆ ತಿಳಿಸಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ಸಮುದ್ರದತ್ತ ಸುಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ನೆರೆಪೀಡಿತ, ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಸಿದ್ಧರಾಗುವಂತೆ ನಿರ್ದೇಶಿಸಲಾಗಿದೆ.
https://pragati.taskdun.com/free-bus-for-ladieskarnatakasevasindu-appjune-11th/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ