Kannada NewsKarnataka NewsLatest

*ಬಿಸಿಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಉಷ್ಣ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನೆರೆ ರಾಜ್ಯ ಕೇರಳದಲ್ಲಿ ಬಿಸಿ ಗಾಳಿ ಹೆಚ್ಚುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕದಲ್ಲಿ ಬಿಸಿಲಿನ ಝಳ ಇನ್ನಷ್ಟು ಹೆಚ್ಚಲಿದೆ ಎಂದು ಮಾಹಿತಿ ನೀಡಿದೆ.

ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಷ್ಣ ಅಲೆ ಹೆಚ್ಚಾಗಲಿದ್ದು, ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಗದಗ, ಹಾವೇರಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ರಾಜಧಾನಿ ಬೆಂಗಳೂರು ದಿನದಿಂದ ದಿನಕ್ಕೆ ಕಾದ ಕಾವಲಿನಂತಾಗುತ್ತಿದ್ದು, ರಣಬಿಸಿಲ ಝಳಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಉಷ್ಣ ಗಾಳಿಯಿಮ್ದಾಗಿ ಜನರಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button