Kannada NewsKarnataka NewsLatest

*ರಣಬಿಸಿಲ ಝಳ ಹೆಚ್ಚಳ: ಈ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ತಾಪಮಾನ ದಿನದಿಂದ್ ದಿನಕ್ಕೆ ಹೆಚ್ಚುತ್ತಿದ್ದು, ರಣ ಬಿಸಿಲ ಝಳಕ್ಕೆ ಜನರು ಹೈರಾಣಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಕಾದ ಕಾವಲಿಯಂತಾಗಿದೆ. ಬಿಸಿಲ ಬೇಗೆಗೆ ಜನರು ಬಸವಳಿದು ಹೋಗುತ್ತಿದ್ದು, ಡಯೇರಿಯಾ, ಭೇದಿ,ತಲೆಸುತ್ತು, ವಾಂತಿ, ಜ್ವರ, ಕೈ-ಕಾಲು ಸೆಳೆತದಂತಹ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿಚೆ.

Home add -Advt

ಕೆಲ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಹೆಚ್ಚಾಗಿರಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.


Related Articles

Back to top button