Karnataka News

*ಈ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಣಬಿಸಿಲು ಹೆಚ್ಚಾಗುತ್ತಿದ್ದು, ಬಿಸಿಲ ಹೊಡೆತಕ್ಕೆ ಜನರು ಬಸವಳಿದು ಹೋಗುತ್ತಿದ್ದಾರೆ. ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಈ ನಡುವೆ ಉತ್ತರ ಒಳನಾಡಿನಲ್ಲಿ ಬಿಸಿಲ ಝಳ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ದಿನ ಒಣ ಹವೆ ಮುಂದುವರೆಯಲಿದ್ದು, ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.


Related Articles

Back to top button