Kannada NewsKarnataka NewsLatest

*ಮುಂದಿನ ಎರಡುದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮತ್ತಷ್ಟು ಏರಲಿದೆ ತಾಪಮಾನ: ಹೀಟ್ ವೇವ್ ಎಚ್ಚರಿಕೆ; ಕೆಲ ಜಿಲ್ಲೆಗಳಲ್ಲಿ ಆಲಿ ಕಲ್ಲು ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಬಸವಳಿದುಹೋಗುತ್ತಿದ್ದಾರೆ. ಮುಂದಿನ 2 ದಿನಗಳಲ್ಲಿ ಬಿಸಿಲ ಝಳ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ಸೂಚನೆ ನೀಡಲಾಗಿದೆ.

Home add -Advt

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button