
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಧಗೆ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಈ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ