Kannada NewsKarnataka NewsLatestPolitics

*ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೆಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಆರಂಭವಾಗಿದ್ದು, ಕೆಲ ಹೊತ್ತಲ್ಲೇ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ದ್ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ದಾವಣಗೆರೆ,ಹಾಸನ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button