ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆ ಹೆಚ್ಚಾಗಲಿದೆ.
ಜೂನ್ 16ರಿಂದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ. ಇಂದಿನಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ.
ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ವಿಧಾನ ಪರಿಷತ್ ಚುನಾವಣೆ: ಮತ ಎಣಿಕೆ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ