ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. ಚುಮು ಚುಮು ಚಳಿಯ ನಡುವೆ ವರುಣಾರ್ಭಟ ಜೋರಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ಬೆಳಗಾವಿ, ರಾಯಚೂರು, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಿತ್ರದ್ಯ್ರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ 25 ಜಿಲ್ಲೆಗಳಲ್ಲಿ ನವೆಂಬರ್ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಗೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲ ಕಡೆಗಳಲ್ಲಿ ಮತ್ತು ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಹಗುರ ಮಳೆಯಾಗಲಿದ್ದು, ಮೋಡಕವಿದ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು
https://pragati.taskdun.com/kamal-hasanadmitedhospital/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ