Kannada NewsKarnataka NewsLatest

*ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ರಾಜ್ಯದ ಜನತೆಗೆ ತಂಪೆರೆದ ಮಳೆರಾಯ; ವರುಣಾರ್ಭಟಕ್ಕೆ ಕೆಲವೆಡೆ ಜನಜೀವನ ಅಸ್ತವ್ಯಸ್ಥ*

ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ವರುಣ ದೇವ ತಂಪೆರೆದಿದ್ದಾನೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರಿಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ದಕ್ಷಿನ ಕರ್ನಾಕದ ಹಲವೆಡೆಗಳಲ್ಲಿ ಭಾರಿ ಮಳೆಯಾಗಿದ್ದು, ಇನ್ನು ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದೆ. ಹಲವೆಡೆ ಗುಡುಗು, ಸಿಡಿಲಿನಿಂದಾಗಿ ಅನಾಹುತಗಳು ಸಂಭವಿಸಿವೆ.

ರಣ ಬಿಸಿಲಿಗೆ ಕಾಡ ಕಾವಲಿಯಂತಾಗಿದ್ದ ಇಳೆ ತಂಪಾಗಿದ್ದು, ರಾಜ್ಯದೆಲ್ಲೆಡೆ ವಾತಾವರಣವೂ ತಣ್ಣಗಾಗಿದೆ. ಈ ನಡುವೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಕೆಲವೆಡೆ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button