Latest

ಭಾರಿ ಮಳೆ; 20 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ತಗ್ಗಿದ್ದರೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ  ಅ.12ರವರೆಗೂ ಭಾರಿ ಮಳೆಯಾಗಲಿದೆ.

ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ ಸೇರಿದಂತೆ 20 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.  ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ನಾಳೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ

ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಭಾರಿ ಮಳೆಯಾಗುತ್ತಿದೆ ಹಾಗಾಗಿ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ  ಹವಾಮಾನ ಇಲಾಖೆ ತಿಳಿಸಿದೆ.

https://pragati.taskdun.com/latest/ksrtc-busaccidentdriver-death-2/

Related Articles

Back to top button