ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯಪುರ, ಕೊಡಗು, ಹಾಸನ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಚಮರಾಜನಗರ, ಯಾದಗಿರಿ, ವಿಜಯಔರ, ಕಲಬುರ್ಗಿ, ಬೀದರ್, ರಾಯಚೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೂಡಕವಿದ ವಾತಾವರನವಿತ್ತು. ಮಧ್ಯಾಹ್ನದ ಬಳಿಕ ದಟ್ಟವಾದ ಮೋಡ ಆವರಿಸಿದ್ದು, ಬಿರುಗಾಳಿ ಆರಂಭವಾಗಿದೆ. ಸಂಜೆ ವೇಳೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ