Latest

ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನ.6ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

Home add -Advt

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ರಾಜಧಾನಿ ಬೆಂಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಏರ್ ಬಸ್ ಉತ್ಪಾದನಾ ಘಟಕ ಸ್ಥಾಪಿಸಲು ಆಹ್ವಾನ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://pragati.taskdun.com/latest/air-bus-manufacturing-plantkarnatakafrench-indo-chamber-of-commerceinaugurationcm-basavaraj-bommai/

 

Related Articles

Back to top button