*ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಕೊಡಗು, ಹಾಸನ, ಮಂಡ್ಯ, ಮೈಸೂರು, ತುಮಕೂರು, ದಾವಣಗೆರೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 6ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಲುವ ಸಾಧ್ಯತೆ ಇದೆ ಇದರ ಪರುಣಾಮವಾಗಿ ಮೇ 7ರವರೆಗೆ ಕರ್ನಾಟಕದ ಹಲವೆಡೆಗಳಲ್ಲಿ ಭಾರಿ ಮಳೆಯಾಗಲಿದೆ.

https://pragati.taskdun.com/nitin-gadkaricampaignnippanishashikala-jolle/

Related Articles

Back to top button