
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಜೂನ್ 9ರಿಂದ 11ರವರೆಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಇಂದು ಮತ್ತು ನಾಳೆ ಬೆಂಗಳೂರು, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಾವಣಗೆರೆ, ಹಾಸನ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗಲಿದೆ.
ಪರಿಷತ್ ಚುನಾವಣೆ: BJP ಪರ ಬೆಳಗಾವಿಯಲ್ಲಿ ಯಡಿಯೂರಪ್ಪ, ನಳೀನ್ ಕುಮಾರ ಕಟೀಲ್ ಪ್ರಚಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ