ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು ನವೆಂಬರ್ 28ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ.
ಬೆಂಗಳೂರು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗಲಿದೆ. ಒಟ್ಟಾರೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಮಹಾರಾಷ್ಟ್ರ ಸರ್ಕಾರಕ್ಕೆ 8 ದಿನಗಳ ಗಡುವು; ಖಡಕ್ ಎಚ್ಚರಿಕೆ ಕೊಟ್ಟ ಜತ್ ತಾಲೂಕು ಜನತೆ
https://pragati.taskdun.com/jath-taluqwater-problemkarnataka-maharashtra-border-issue/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ