Latest

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳು, ಬೆಂಗಳೂರಿನಲ್ಲಿ ನ.6ರವರೆಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಶಾನ್ಯ ಮಾನ್ಸೂನ್ ದಕ್ಷಿಣ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು, ಕೇರಳಕ್ಕೆ ಆಗಮಿಸಿದ್ದು, ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಧಾನಿ ಮೋದಿ ಸೂಚನೆ: ಕೊಲ್ಲಾಪುರದಲ್ಲಿ ಶುಕ್ರವಾರ ಕರ್ನಾಟಕ – ಮಹಾರಾಷ್ಟ್ರ ಉನ್ನತ ಮಟ್ಟದ ಸಭೆ

https://pragati.taskdun.com/latest/pm-modi-instruction-karnataka-maharashtra-high-level-meeting-in-kolhapur-on-friday/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button