
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಲಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಾತ್ರಿಯಿಡಿ ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಹಲವೆಡೆ ರಸ್ತೆ, ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿವೆ. ರಾಜಧಾನಿಯಲ್ಲಿ ಮತ್ತೆ ಅವಾಂತರಗಳು ಸೃಷ್ಟಿಯಾಗಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ ಹಾವು ಪ್ರತ್ಯಕ್ಷ !
https://pragati.taskdun.com/latest/rat-snake-enters-in-to-union-home-minister-amit-shas-residence/