LatestUncategorized

*ರಾಜ್ಯದಲ್ಲಿ ಮಹಾಮಳೆ; ಒಂದೇ ದಿನದಲ್ಲಿ 7 ಜನರು ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ವರುಣಾರ್ಭಟಕ್ಕೆ 7 ಜನರು ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 7 ಜನರು ಮಳೆ ಆರ್ಭಟಕ್ಕೆ ಸಾವನ್ನಪ್ಪಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಳೆಗೆ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಇನ್ಫೋಸಿಸ್ ಉದ್ಯೋಗಿ ಯುವತಿ ಭಾನುರೇಖಾ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ರಾಜಕಾಲುವೆಯಲ್ಲಿ ಲೋಕೇಶ್ ಎಂಬ ಯುವಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಇಂದು ಬೆಳಿಗ್ಗೆ ಆತನ ಶವ ಪತ್ತೆಯಾಗಿದೆ.

ಇನ್ನು ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ವರುಣಾರ್ಭಟಕ್ಕೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಓರ್ವ ಸಾವನ್ನಪ್ಪಿದ್ದರೆ, ಮೈಸೂರಿನ ಮಂಟಿಕೊಪ್ಪಲಲ್ಲಿ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನಲ್ಲಿ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹೊಲಕ್ಕೆ ಹೋದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

Home add -Advt
https://pragati.taskdun.com/karnataka-session-start3-dayssiddaramaiah-govt/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button